ಬೆಂಗಳೂರು : 136 ಸ್ಥಾನ ಬಂದಿದೆಯಂದು ಮೈ ಮರೆಯಬೇಡಿ ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ ರವಾನಿಸಿದೆ.
ಚುನಾವಣೆ ಫಲಿತಾಂಶ ಬಂದು ನಾಲ್ಕು ದಿನಗಳಾಗಿದೆ. ಆದರೆ ಇನ್ನೂ ಕೂಡ ಸಿಎಂ ಆಯ್ಕೆ ಕಗ್ಗಂಟು ಬಗೆಹರಿದಿಲ್ಲ.
ಇದರಿಂದ ಸಮಸ್ತೆ ಉದ್ಬವವಾಗುವ ಸಾಧ್ಯತೆ ಇದೆ. ಇದನ್ನು ವಿಪಕ್ಷಗಳು ಲಾಭ ಪಡೆದುಕೊಳ್ಳುವ ಸಾಧ್ಯತೆ. ಕಾಂಗ್ರೆಸ್ ಶಾಸಕರನ್ನು BJP ನಾಯಕರು ಸಂಪರ್ಕಿಸುವ ಸಾಧ್ಯತೆ ಇದೆಯಂದು ಸುರ್ಜೇವಾಲ ಜತೆ ಸಿದ್ದರಾಮಯ್ಯ ಚರ್ಚೆ ವೇಳೆ ವಿಚಾರ ಪ್ರಸ್ತಾಪ ಮಾಡಲಾಗಿದೆ. ಈಗಾಗಲೇ ಅನೇಕ ಶಾಸಕರನ್ನು ಬಿಜೆಪಿ ಸಂಪರ್ಕಿಸಿರುವ ಮಾಹಿತಿ ಸಿಕ್ಕಿದ್ದು, ನಾವು ಮೈಮರೆತರೆ ಯಾವುದೇ ಸಮಸ್ಯೆ ಎದುರಾಗಬಹುದು ಎಂದು ಸಿದ್ದರಾಮಯ್ಯ, ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫಿಕ್ಸ್ ಆಗಿದೆ ಎನ್ನಲಾಗಿದ್ದು, ಹೈಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎನ್ನಲಾಗಿದೆ.ಇಂದು ರಾಹುಲ್ ಗಾಂಧಿ ಭೇಟಿ ಬಳಿಕ ‘ಸಿದ್ದರಾಮಯ್ಯ ಸಿಎಂ’ ಎಂದು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಲಿ ಎಂದು ಈ ಹಿಂದೆ ರಾಹುಲ್ ಗಾಂಧಿ ಒಲವು ವ್ಯಕ್ತಪಡಿಸಿದ್ದರು. ಇಂದು 11 ಗಂಟೆಗೆ ಹೈ ವೋಲ್ಟೇಜ್ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ.