ಬೆಂಗಳೂರು, ಮೇ 20: ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ನಲ್ಲಿ ವ್ಯಾಯಾಮ ಮಾಡಿದ್ದರು. ಆಗ ಅವರು ಹೃದಯಾಘಾತಕ್ಕೆ ಒಳಗಾಗಿ, ಕುಸಿದು ಬಿದ್ದಿದ್ದರು.ಕೂಡಲೇ ಅವರನ್ನು ಬೆಂಗಳೂರಿನ ಯಶವಂತಪುರದಲ್ಲಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.