ಮಾಣಿಯಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮತ್ತು ಹರಿಕೃಷ್ಣ ಬಂಟ್ವಾಳ್ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಪೊಲೀಸ್ ವರಿಷ್ಟಾಧಿಕಾರಿಯನ್ನು ಪೋನ್ ಮುಖಾಂತರ ಸಂಪರ್ಕ ಮಾಡಿ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ನಳಿನ್ ತಿಳಿಸಿದ್ದಾರೆ.