Connect with us

ಕ್ರೈಂ ನ್ಯೂಸ್

ಹೈಟೆಕ್ ವೇಶ್ಯಾವಾಟಿಕೆ ದಂಧೆ- ದಂಪತಿಗಳ ಬಂಧನ 6 ಯುವತಿಯರ ರಕ್ಷಣೆ.

Published

on

ಶಿವಮೊಗ್ಗ:  ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರವೊಂದರಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ.

ಈ ಕುರಿತಂತೆ ಗುರುವಾರ ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ದಾಳಿಯ ವಿವರ ನೀಡಿದೆ. ಖಚಿತ ವರ್ತಮಾನದ ಮೇರೆಗೆ ಮೇ 24 ರಂದು ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದೆ.

ಹೊರ ಊರಿನ ಯುವತಿಯರು: ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಈ ವೇಳೆ ಸ್ಪಾದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ಸ್ಪಾ ನಡೆಸುತ್ತಿದ್ದ ದಂಪತಿಯು, ಬೇರೆಡೆಯಿಂದ ಯುವತಿಯರನ್ನು ಕರೆಯಿಸಿ, ಹಣದ ಆಮಿಷ ತೋರ್ಪಡಿಸಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದು ಬೆಳಕಿಗೆ ಬಂದಿದೆ.
ಡಿವೈಎಸ್ಪಿ ನೇತೃತ್ವ: ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಂ. ಸುರೇಶ್ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

ಹೈಟೆಕ್ ದಂಧೆ: ಶಿವಮೊಗ್ಗದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ಭಾರೀ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಮಾಹಿತಿಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ. ಇದೀಗ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ ದಂಧೆಯು ಪೊಲೀಸರ ತನಿಖೆಯಿಂದ ಬಯಲಿಗೆ ಬರುವಂತಾಗಿದೆ.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading