ಮಂಗಳೂರು :(Zoom Karnataka) 08 ಪೊಳಲಿ ಪರಿಸರದಲ್ಲಿ ನಿನ್ನೆ ಸಂಜೆ ಭಾರಿ ಮಳೆಯಾಗಿದೆ. ಬುಧವಾರ ಬೆಳಿಗ್ಗೆ ಮಳೆಗಾಗಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿತ್ತು. ಸಂಜೆಯ ವೇಳೆಗೆ ದೇವಸ್ಥಾನದ ಆವರಣದಲ್ಲಿ ಧಾರಕಾರವಾಗಿ ಮಳೆ ಸುರಿದಿದೆ. ಮಳೆಯಿಂದ ಭಕ್ತ ಜನ ಪುಳಕಿತರಾಗಿದ್ದು ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಅನುಗ್ರಹದಿಂದ ಮಳೆಯಾಗಿದೆ ಎನದನುವುದು ಭಕ್ತ ಜನರ ನಂಬಿಕೆ.