ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಖ್ಯಾತಿಯ ನಿವೇದಿತಾ ಗೌಡ ಮತ್ತೆ ಸುದ್ದಿಯಲ್ಲಿದ್ದಾರೆ. ಗಿಚ್ಚಿ ಗಿಲಿ ಗಿಲಿ ಶೋ ಮೂಲಕ ನಿವೇದಿತಾ ಗೌಡ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡುತ್ತಿದ್ದರು. ಇದೀಗ ಬಿಗ್ಬಾಸ್ ಬೆಡಗಿ ಸೋಷಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕ್ಟೀವ್ ಆಗಿದ್ದಾರೆ.
ಇದೀಗ ಬಿಗ್ಬಾಸ್ ಖ್ಯಾತಿಯ ನಿವೇದಿತಾ ಗೌಡ 8 ಹೊಸ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹೊಸ ಲುಕ್ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಹಲವಾರು ರೀತಿಯ ಔಟ್ಫಿಟ್ನಲ್ಲಿ ನಟಿ ಅಪ್ಸರೆಯಂತೆ ಕಂಗೊಳಿಸಿದ್ದಾರೆ. ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ನನಗೆ ಈಗ ಯಾವ ರೀತಿ ಫೀಲ್ ಆಗ್ತಿದೆ ಎಂದರೆ 200 ಔಟ್ಫಿಟ್ ಹಾಕಿದ ಹಾಗೆ ಫೀಲ್ ಆಗುತ್ತಿದೆ ಎಂದಿದ್ದಾರೆ. ಇನ್ನು ಈ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಮಾಡಿದ್ದಾರೆ.
ಇನ್ನು, ನಿವೇದಿತಾ ಗೌಡ ಕಲರ್ ಕಲರ್ ಫೋಟೋಗಳನ್ನು ನೋಡಿದ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ವಿಡಿಯೋ ನೋಡಿದ ಬಳಿಕ ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್ ಮಾಡಿದ್ದಾರೆ. ಎಲ್ಲಾ ಉಡುಪುಗಳಲ್ಲಿ ತುಂಬಾ ಸುಂದರವಾಗಿ ಕಾಣುತ್ತಿದ್ದೀರಿ, ಮುದ್ದು ಗೊಂಬೆ ನೀವು, ಸೋ ಕ್ಯೂಟ್ ಲುಕ್ ಎಂದು ಕಾಮೆಂಟ್ ಮಾಡಿದ್ದಾರೆ.