ದಾವಣಗೆರೆ, ನ.25(Zoom Karnataka): ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಯತ್ನಾಳ್ನ ಹರಕು ಬಾಯಿ ಕಾರಣ ಎಂದು ಎಂಪಿ ರೇಣುಕಾಚಾರ್ಯ ಅವರು ಯತ್ನಾಳ್ಗೆ ತಿರುಗೇಟು ನೀಡಿದ್ದಾರೆ.
ಕರ್ನಾಟಕದ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಯಡಿಯೂರಪ್ಪ ಮತ್ತು ಅವರ ಪುತ್ರ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಣವೆಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಎಂಪಿ ರೇಣುಕಾಚಾರ್ಯ ಅವರು ಯತ್ನಾಳ್ಗೆ ತಿರುಗೇಟು ನೀಡಿದ್ದಾರೆ. , ಬಿಜೆಪಿ ಸೋಲಿಗೆ ಯತ್ನಾಳ್ನ ಹರಕು ಬಾಯಿ ಕಾರಣ ಎಂದು ತಿರುಗೇಟು ನೀಡಿದ್ದಾರೆ.
ಯತ್ನಾಳ್ ಬೆಳಗಾದರೆ ಸಾಕು ಬಿಎಸ್‌ವೈ, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ರಾಜ್ಯದಲ್ಲಿ ಪಕ್ಷದ ಹಿನ್ನಡೆಗೆ ಯತ್ನಾಳ್ ನೇರ ಕಾರಣ. ರಾಜ್ಯದ ಜನ ವಿಜಯೇಂದ್ರ ನಾಯಕತ್ವವನ್ನ ಒಪ್ಪಿದ್ದಾರೆ. ಬಸನಗೌಡ ಯತ್ನಾಳ್ ತಂಡಕ್ಕೆ ಬೆಲೆ ಕೊಡಬೇಡಿ. ಯಾವ ಕಾರಣಕ್ಕೂ ವಿಜಯೇಂದ್ರ ಅಧ್ಯಕ್ಷ ಸ್ಥಾನ ಬದಲಾಗಲ್ಲ. ಮುಂದಿನ ವಿಧಾನಸಭೆ ಚುನಾವಣೆ ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿದೆ ಎಂದರು.