Connect with us

ತಾಜಾ ಸುದ್ದಿ

ಭಕ್ತರ ಮನೆಬಾಗಿಲಿಗೆ ದೇವರ ಪ್ರಸಾದ: ಇ-ಪ್ರಸಾದ ಸೇವೆಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

Published

on

ಬೆಂಗಳೂರು,ಮಾ.28(Zoom Karnataka)ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಪ್ರಸಾದವನ್ನು ಮನೆಬಾಗಿಲಿಗೆ ತಲುಪಿಸುವ ಇ-ಪ್ರಸಾದ ಸೇವೆಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಗುರುವಾರ ಚಾಲನೆ ನೀಡಿದರು.

ಬೆಂಗಳೂರಿನ ಶಾಂತಿನಗರದ ಸಾರಿಗೆ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 14 ದೇವಾಲಯಗಳನ್ನು ಆಯ್ಕೆ ಮಾಡಿ ಪ್ರಾಯೋಗಿಕ ಪ್ರಸಾದ ಸೇವೆಗೆ ಚಾಲನೆ ನೀಡಲಾಗಿದೆ.

ಇ-ಪ್ರಸಾದ ತರಿಸಿಕೊಳ್ಳಬಹುದಾದ ದೇವಾಲಯಗಳು:

  • ಶ್ರೀ ವಿನಾಯಕಸ್ವಾಮಿ ದೇವಾಲಯ ಜಯನಗರ, ಬೆಂಗಳೂರು
  • ಶ್ರೀ ಚಲುವನಾರಾಯಣಸ್ವಾಮಿ ದೇವಸ್ಥಾನ, ಮಂಡ್ಯ ಜಿಲ್ಲೆ
  • ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನ, ನಂಜನಗೂಡು, ಮೈಸೂರು
  • ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನ ಮಾಲೂರು, ಕೋಲಾರ ಜಿಲ್ಲೆ
  • ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯ, ಹಲಸೂರು, ಬೆಂಗಳೂರು
  • ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು, ಉಡುಪಿ ಜಿಲ್ಲೆ
  • ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಸ್ಥಾನ, ಗವಿಪುರ, ಬೆಂಗಳೂರು
  • ಶ್ರೀ ಕ್ಷೇತ್ರ ಝರಣಿ ನರಸಿಂಹ ದೇವಸ್ಥಾನ, ಬೀದರ್
  • ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನ, ಸವದತ್ತಿ, ಬೆಳಗಾವಿ
  • ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ದಕ್ಷಿಣ ಕನ್ನಡ
  • ಶ್ರೀ ಕನಕದುರ್ಗಮ್ಮ ದೇವಸ್ಥಾನ, ಬಳ್ಳಾರಿ
  • ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ, ವಿಜಯನಗರ ಜಿಲ್ಲೆ
  • ಶ್ರೀ ಹುಲಿಗೆಮ್ಮ ದೇವಾಲಯ, ಕೊಪ್ಪಳ
  • ಶ್ರೀ ಗುರುದತ್ತಾತ್ರೇಯ ಸ್ವಾಮಿ ದೇವಸ್ಥಾನ, ಕಲಬುರಗಿ

ಇವುಗಳಲ್ಲದೆ ಇನ್ನೂ 14 ದೇವಾಲಯಗಳ ಪ್ರಸಾದ ಸೇವೆಯನ್ನು ಮನೆಬಾಗಿಲಿಗೆ ತಲುಪಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಮುಜರಾಯಿ ಇಲಾಖೆಯ ಪ್ರಮುಖ ದೇವಾಲಯಗಳ ಪ್ರಸಾದವನ್ನು ಭಕ್ತರ ಮನೆಬಾಗಿಲಿಗೆ ಸಿಎಸ್‌ಸಿ ಇ-ಗವರ್ನೆನ್ಸ್ ಸರ್ವೀಸ್​ ಇಂಡಿಯಾ CSC e-Governance Services India Limited ಸಹಯೋಗದೊಂದಿಗೆ ಅನುಷ್ಠಾನಗೊಳಿಸಿ ಜಾರಿಗೆ ತರಲಾಗುತ್ತಿದೆ. ಈ ದೇವಾಲಯಗಳಲ್ಲಿ ಕಲ್ಲುಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಭಸ್ಮ, ಕುಂಕುಮ, ಬಿಲ್ವಪತ್ರೆ, ಹೂವು, ತುಳಸಿ ಮತ್ತು ದೇವಾಲಯದ ಸ್ತೋತ್ರಗಳನ್ನು ತರಿಸಿಕೊಳ್ಳಬಹುದು.


Discover more from Zoom Karnataka

Subscribe to get the latest posts sent to your email.

Continue Reading
Click to comment

Leave a Reply

Your email address will not be published. Required fields are marked *

error: Content is protected !!

Discover more from Zoom Karnataka

Subscribe now to keep reading and get access to the full archive.

Continue reading